-->
 ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ


ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ YMC  ಹಾಗೂ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿಉಡುಪಿಯ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ವೈಎಂಸಿ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್  ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ವೇತಾ ಶ್ರೀನಿವಾಸ್ ಅವರು ಪರಿಸರ ಸಂರಕ್ಷಣೆಯ ಮಹತ್ವ, ಮರಗಳ ಅಗತ್ಯತೆ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ವೈಎಂಸಿ ಸದಸ್ಯರು, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

Ads on article

Advertise in articles 1

advertising articles 2

Advertise under the article