ಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಹಣ್ಣು ಸಂಗ್ರಹ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
Sunday, June 21, 2026
ಉಡುಪಿ ನಗರದ ಆದಿ ಉಡುಪಿ ಸಂತೆ ಮಾರ್ಕೆಟ್‌ನಲ್ಲಿರುವ ಹಣ್ಣು-ಹಂಪಲು ಸಂಗ್ರಹ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.
ಇಂದು ಬೆಳಿಗ್ಗೆ ಅಂಗಡಿಯಲ್ಲಿ ಸಂಗ್ರಹಿಸಲಾಗಿದ್ದ ಹಣ್ಣು-ಹಂಪಲುಗಳ ಬಾಕ್ಸ್‌ಗಳಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಅಂಗಡಿಯ ಒಳಭಾಗವನ್ನು ಆವರಿಸಿದ್ದರಿಂದ ಅಲ್ಲಿದ್ದ ಸಾಮಗ್ರಿಗಳು ಸುಟ್ಟು ಹಾನಿಗೊಳಗಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವರ ಸಮಯೋಚಿತ ಕ್ರಮದಿಂದ ಬೆಂಕಿ ಪಕ್ಕದ ಅಂಗಡಿಗಳಿಗೆ ವ್ಯಾಪಿಸುವುದು ತಪ್ಪಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಅಂಗಡಿಯಲ್ಲಿದ್ದ ಹಣ್ಣು-ಹಂಪಲು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
