ಉಡುಪಿಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಕಮೆಂಡೇಶನ್ ಡಿಸ್ಕ್ ಪ್ರಶಸ್ತಿ
Friday, June 26, 2026
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2025–2026ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಕಮೆಂಡೇಶನ್ ಡಿಸ್ಕ್ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯ ಎ.ಎಸೈ ರಾಜೇಶ್ ಪಿ., ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ARSI ಸುಧಾಕರ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಪ್ರಭು ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಶಿವಕುಮಾರ್ ಎಚ್. ಎಂ. ಪ್ರಶ್ಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ತವ್ಯದ ಮೇಲಿನ ನಿಷ್ಠೆ, ಪ್ರಾಮಾಣಿಕತೆ, ಶಿಸ್ತು, ಸಾರ್ವಜನಿಕ ಸೇವೆಯಲ್ಲಿನ ಸಮರ್ಪಣೆ ಹಾಗೂ ಇಲಾಖೆಯ ಅಭಿವೃದ್ಧಿಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಘೋಷಿಸಿದೆ.