ಮಂಗಳೂರಿಗೆ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ
Friday, June 12, 2026
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಧ್ಯಾಹ್ನ ಸುಮಾರು 1:40ರ ವೇಳೆಗೆ ದೆಹಲಿಯಿಂದ ಮಂಗಳೂರಿಗೆ ಬಂದಿಳಿದ ವಿಜಯ್ ಅವರನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆಗಳ ಮೂಲಕ ಭರ್ಜರಿ ಸ್ವಾಗತ ಕೋರಿದರು. ಅಭಿಮಾನಿಗಳತ್ತ ಕೈಬೀಸಿ ನಗುಮುಖದಿಂದ ಪ್ರತಿಕ್ರಿಯಿಸಿದ ವಿಜಯ್ ಬಳಿಕ ಉಡುಪಿ ಜಿಲ್ಲೆಯತ್ತ ಪ್ರಯಾಣ ಬೆಳೆಸಿದರು. ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ಕೊಲ್ಲೂರಿನವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಾರ್ಗದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.