-->
 ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ: ಸಮಗ್ರ ತನಿಖೆಗೆ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀ ಆಗ್ರಹ

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ: ಸಮಗ್ರ ತನಿಖೆಗೆ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀ ಆಗ್ರಹ


ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಶೀರೂರು ಮಠದ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಮಹತ್ವದ ಧಾರ್ಮಿಕ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಸಂಗತಿ. ಇಂತಹ ಗಂಭೀರ ಆರೋಪಗಳ ಹಿಂದೆ ಇರುವ ಸತ್ಯಾಸತ್ಯತೆಯನ್ನು ಸಂಬಂಧಿತ ತನಿಖಾ ಸಂಸ್ಥೆಗಳು ಪರಿಶೀಲಿಸಬೇಕು. ಧಾರ್ಮಿಕ ಕ್ಷೇತ್ರದ ವಿರುದ್ಧ ಸಂಚು ರೂಪಿಸಿರುವವರು ಯಾರು, ಆರೋಪಗಳ ಹಿಂದೆ ಇರುವ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚಿ ಸಾರ್ವಜನಿಕರ ಮುಂದೆ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಧರ್ಮಸ್ಥಳವು ಲಕ್ಷಾಂತರ ಭಕ್ತರ ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಕೇಂದ್ರವಾಗಿದ್ದು, ಇಂತಹ ಪವಿತ್ರ ಕ್ಷೇತ್ರಗಳ ಕುರಿತು ಕೇಳಿಬರುವ ಅವಹೇಳನಕಾರಿ ಆರೋಪಗಳು ಹಾಗೂ ಷಡ್ಯಂತ್ರಗಳು ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಗೆ ಕಾರಣವಾಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಂಬಂಧಿತ ಅಧಿಕಾರಿಗಳು ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸುವ ಮೂಲಕ ಸತ್ಯಾಂಶವನ್ನು ಹೊರತಂದು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಗ್ರಹಿಸಿದರು.




Ads on article

Advertise in articles 1

advertising articles 2

Advertise under the article