ನಾಳೆ ಉಡುಪಿ ನಗರಕ್ಕೆ ಕುಡಿಯುವ ನೀರಿನ ಸರಬರಾಜು ಇಲ್ಲ
Thursday, June 18, 2026
ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕುಡಿಯುವ ನೀರು ಸ್ಥಾವರದ ಆರ್.ಆರ್. ನಂಬರ್ 6ರ ಕ್ಯುಬಿಕಲ್ ಮೀಟರ್ ಬದಲಾವಣೆ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 19ರಂದು ಉಡುಪಿ ನಗರಸಭೆ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಿಗದಿತ ಕಾಮಗಾರಿಯನ್ನು ಸುಗಮವಾಗಿ ಪೂರ್ಣಗೊಳಿಸಲು ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಹೀಗಾಗಿ ಸಾರ್ವಜನಿಕರು ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ನಗರಸಭೆ ಮನವಿ ಮಾಡಿದೆ.
ಕಾಮಗಾರಿ ಪೂರ್ಣಗೊಂಡ ಬಳಿಕ ನೀರು ಸರಬರಾಜು ಪುನರಾರಂಭಗೊಳ್ಳಲಿದ್ದು, ಉಂಟಾಗುವ ತಾತ್ಕಾಲಿಕ ಅನಾನುಕೂಲತೆಯನ್ನು ಸಾರ್ವಜನಿಕರು ಸಹಕಾರದಿಂದ ಸ್ವೀಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.