ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ
Monday, June 22, 2026
ಕಳೆದ ಮೂರು ವರ್ಷಗಳಿಂದ ಉಡುಪಿಯ ಎಂಜಿಎಂ ಕಾಲೇಜು ಬಳಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಗೆ ನೂತನ ನಿರ್ದೇಶಕರನ್ನಾಗಿ ಸ್ಟೀವನ್ ಕುಲಾಸೊ ಉದ್ಯಾವರ ಇವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷ ಸಹಿತ 11 ನಿರ್ದೇಶಕರು ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ಸ್ಟೀವನ್ ಕುಲಾಸೊ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾರ್ಯನಿರೂಪಕರಾಗಿರುವ ಇವರು, ಕಲಾ ಸಂಸ್ಥೆಯಾದ ನಿರಂತರ್ ಉದ್ಯಾವರ ಇದರ ಸ್ಥಾಪಕರಾಗಿದ್ದಾರೆ.