ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ (Video)
Thursday, June 25, 2026
ಖಾಸಗಿ ಶಾಲಾ ಮಕ್ಕಳ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿರಸ್ತೆ ವಿಭಾಜಕಕ್ಕೆ ಡಿಕ್ಕಿಯಾದ ಘಟನೆ ಮಣಿಪಾಲದ ಕೆ.ಎಫ್.ಸಿ ಬಳಿ ನಡೆದಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದೆ. ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿವೈಡರ್ ಹಾಗೂ ಬಸ್ಸಿಗೆ ಹಾನಿಯಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.