-->
 ಬೈರಂಪಳ್ಳಿ ದೂಪದಕಟ್ಟೆ ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಸ್ವಯಂಪ್ರಭರಿಗೆ ಬೀಳ್ಕೊಡುಗೆ

ಬೈರಂಪಳ್ಳಿ ದೂಪದಕಟ್ಟೆ ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಸ್ವಯಂಪ್ರಭರಿಗೆ ಬೀಳ್ಕೊಡುಗೆ


ಬೈರಂಪಳ್ಳಿ ದೂಪದಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಸ್ವಯಂಪ್ರಭ ಅವರಿಗೆ ಶಾಲಾ ವತಿಯಿಂದ ಆತ್ಮೀಯ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.

ಇದೇ ಸಂದರ್ಭದಲ್ಲಿ ಸಮಾಜಸೇವಕರಾದ ಬಿ.ಎನ್. ರಾಮಚಂದ್ರ ಕುಂಜಿತಾಯರವರು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ನೀಡಿದ ಸುಮಾರು 40 ಸಾವಿರ ಮೌಲ್ಯದ ನೋಟ್ ಪುಸ್ತಕಗಳ ವಿತರಣೆ ಕಾರ್ಯಕ್ರಮವೂ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸುಕೇಶ್ ಕುಲಾಲ್ ವಹಿಸಿದ್ದರು. ಶಿಕ್ಷಣ ಇಲಾಖೆಯ ಪರವಾಗಿ ಆಗಮಿಸಿದ್ದ ಸಿಆರ್‌ಪಿ ಶಾಂತಾ ಅವರು ಮಾತನಾಡಿ, ಸ್ವಯಂಪ್ರಭ ಅವರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸ್ಥಳೀಯ ಭಜನ ಮಂಡಳಿಯ ಅಧ್ಯಕ್ಷ ದಿನೇಶ್ ಕುಲಾಲ್ ಪೆರ್ಜ, ಅತಿಥಿ ಶಿಕ್ಷಕಿ ಶ್ರೀಮತಿ ಸುಮಲತಾ, ಗೌರವ ಶಿಕ್ಷಕಿ  ಸಪ್ನಾ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರು ಅತಿಥಿಗಳನ್ನು ಸ್ವಾಗತಿಸಿ, ಸಹಶಿಕ್ಷಕಿ ಸರಸ್ವತಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ಎ.ಎನ್. ಲತಾ ನಿರೂಪಿಸಿದರು.


Ads on article

Advertise in articles 1

advertising articles 2

Advertise under the article