-->
  ಸ್ಪೆಲ್ ಬಿ ಸ್ಪರ್ಧೆಯಲ್ಲಿ ಉಡುಪಿ ವಿದ್ಯೋದಯ ಶಾಲಾ ವಿದ್ಯಾರ್ಥಿನಿಗೆ 14ನೇ ರ್‍ಯಾಂಕ್

ಸ್ಪೆಲ್ ಬಿ ಸ್ಪರ್ಧೆಯಲ್ಲಿ ಉಡುಪಿ ವಿದ್ಯೋದಯ ಶಾಲಾ ವಿದ್ಯಾರ್ಥಿನಿಗೆ 14ನೇ ರ್‍ಯಾಂಕ್


ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಕು. ಫಾತಿಮ ಶಿಝಾ ಅಲಿ ಅವರು ವಿಜ್ ಇಂಟರ್‌ನ್ಯಾಷನಲ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸ್ಪೆಲ್ ಬಿ (Spell Bee) ಸ್ಪರ್ಧೆಯಲ್ಲಿ 14ನೇ ರ್ಯಾಂಕ್ ಗಳಿಸಿದ್ದಾರೆ.

ಕು. ಫಾತಿಮ ಶಿಝಾ ಅಲಿ ಅವರು ಕಾಂಗ್ರೆಸ್ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಹಬೀಬ್ ಅಲಿ ಮತ್ತು ಉಡುಪಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕಿ  ಫರ್ಝನಾ ಎಂ. ದಂಪತಿ ಪುತ್ರಿಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿವಿಧ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಶೈಕ್ಷಣಿಕ ಸಾಧನೆಗಳನ್ನು ದಾಖಲಿಸಿ ಇನ್ನಷ್ಟು ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಎಂದು ಶುಭ ಹಾರೈಸಿದ್ದಾರೆ.


 

Ads on article

Advertise in articles 1

advertising articles 2

Advertise under the article