-->
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.2ರಂದು ಶಾಲೆ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.2ರಂದು ಶಾಲೆ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ


ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 2 (ಗುರುವಾರ) ರಂದು ರಜೆ ಘೋಷಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿಲ್ಲದಿದ್ದರೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ ಇಲಾಖೆ ಹಾಗೂ ಜಿಲ್ಲಾ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಮುಂದುವರಿಯುವ ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿದ್ದಲ್ಲಿ ಮುಂದಿನ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article