ಉಡುಪಿ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ: ಜುಲೈ 25ರಂದು ಶಾಲೆ, ಪಿಯು ಕಾಲೇಜುಗಳಿಗೆ
Friday, July 24, 2026
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಅರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜನಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ, ಪದವಿ ಪೂರ್ವ, ಡಿಪ್ಲೊಮಾ, ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.