26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್; ಕೇಂದ್ರ ಸಚಿವರ ಮನವೊಲಿಕೆಗೆ ಸ್ಪಂದನೆ
Friday, July 24, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಗುರುವಾರ ತಡರಾತ್ರಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.
ಗುರುಗ್ರಾಮದ ಮೇದಾಂತ ಮೆಡಿಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಂಗ್ಚುಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರ ಮನವೊಲಿಕೆಯ ನಂತರ ಇಬ್ಬರು ಸಚಿವರು ವಾಂಗ್ಚುಕ್ ಅವರಿಗೆ ಜ್ಯೂಸ್ ಕುಡಿಸುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.
ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಚುಕ್ ಅವರು, "ನನ್ನ ಉಪವಾಸವನ್ನು ಕೊನೆಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ನನ್ನೊಂದಿಗೆ ನಿಂತು ಬೆಂಬಲ ನೀಡಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು" ಎಂದು ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಕೈ ಹಿಡಿದು ಹೇಳಿದರು.
ಈ ಸಂದರ್ಭದಲ್ಲಿ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಕೂಡ ಉಪಸ್ಥಿತರಿದ್ದರು.