-->
ಕೃಷ್ಣಮೂರ್ತಿ ಆಚಾರ್ಯ ಸಾರಥ್ಯದಲ್ಲಿ ಜು.31ರಿಂದ ಆ.2ರವರೆಗೆ ಉಡುಪಿಯಲ್ಲಿ ‘ಸ್ವದೇಶಿ ಖಾದ್ಯ ಮೇಳ’

ಕೃಷ್ಣಮೂರ್ತಿ ಆಚಾರ್ಯ ಸಾರಥ್ಯದಲ್ಲಿ ಜು.31ರಿಂದ ಆ.2ರವರೆಗೆ ಉಡುಪಿಯಲ್ಲಿ ‘ಸ್ವದೇಶಿ ಖಾದ್ಯ ಮೇಳ’


"ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ" ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ಮೂರು ದಿನಗಳ ‘ಸ್ವದೇಶಿ ಖಾದ್ಯ ಮೇಳ’ ಆಯೋಜಿಸಲಾಗಿದೆ.

ಸಮಾಜ ಸೇವಕ, ಕಾಂಗ್ರೆಸ್ ಮುಖಂಡ, ವಿವಿಧ ದೈವ-ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ಸಾರಥ್ಯದಲ್ಲಿ ಶಕ್ತಿ ಇವೆಂಟ್ಸ್ಮೇ ಆಶ್ರಯದಲ್ಲಿ ಈ ಮೇಳವು ಜುಲೈ 31ರಿಂದ ಆಗಸ್ಟ್ 2ರವರೆಗೆ ನಡೆಯಲಿದೆ.

ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮೇಳ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ.

ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಮಸಾಲೆ ಪದಾರ್ಥಗಳು ಸೇರಿದಂತೆ ವಿವಿಧ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳಕ್ಕೆ ಸಾವಿರಾರು ಮಂದಿ ಭೇಟಿ ನೀಡುವ ನಿರೀಕ್ಷೆಯಿದ್ದು, ಸ್ಥಳೀಯ ಉದ್ಯಮಿಗಳು, ಸ್ವಯಂ ಉದ್ಯೋಗಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಮೇಳದಲ್ಲಿ ಸ್ಟಾಲ್‌ಗಳನ್ನು ಬುಕ್ ಮಾಡಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ 80734 97446 ಅಥವಾ 63668 61816 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article