-->
ಜು.31: ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಜು.31: ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಜುಲೈ 31ರಂದು ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ವೇಳೆ ಗೌರವಯುತ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಶಾಸಕ ಯಶ್ಪಾಲ್ ಸುವರ್ಣ ಅವರು ಬಳಸಿರುವ ಕಳಪೆ ಹಾಗೂ ಆಕ್ಷೇಪಾರ್ಹ ಭಾಷೆ ಖಂಡನೀಯವಾಗಿದೆ. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸೌಜನ್ಯದ ರಾಜಕೀಯವನ್ನು ಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ವತಿಯಿಂದ ಜುಲೈ 31ರಂದು ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ ಹಾಗೂ ಹರೀಶ್ ಕಿಣಿ ಅಲೆವೂರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article