ಸುರತ್ಕಲ್ ಸಮುದ್ರದಲ್ಲಿ ನಾಡದೋಣಿ ಮುಳುಗಡೆ: 6 ಮಂದಿ ಮೀನುಗಾರರ ರಕ್ಷಣೆ
Saturday, July 18, 2026
ಬೃಹತ್ ಗಾತ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ನಾಡದೋಣಿಯೊಂದು ಸುರತ್ಕಲ್‌ನ ಎನ್‌ಐಟಿಕೆ ಬೀಚ್ ಸಮೀಪದ ಮುಳುಗಡೆಯಾದ ಘಟನೆ ನಡೆದಿದೆ.
ದೋಣಿಯಲ್ಲಿದ್ದ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಈ ಆರು ಮಂದಿ ಮೀನುಗಾರರು ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಿಂದ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ಸುರತ್ಕಲ್‌ನ ಎನ್‌ಐಟಿಕೆ ಕರಾವಳಿ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಏಕಾಏಕಿ ಭಾರೀ ಗಾಳಿ ಬೀಸಿದ್ದು, ದೈತ್ಯ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿ ನಿಯಂತ್ರಣ ತಪ್ಪಿ ಸಮುದ್ರದಲ್ಲೇ ಮಗುಚಿ ಮುಳುಗಡೆಯಾಯಿತು.
ದೋಣಿ ಮುಳುಗುತ್ತಿದ್ದಂತೆಯೇ ಅದರಲ್ಲಿದ್ದ ಆರು ಮಂದಿ ಮೀನುಗಾರರು ಸಮುದ್ರದ ಅಲೆಗಳ ನಡುವೆ ಸಿಲುಕಿದ್ದು, ಸಮೀಪದಲ್ಲೇ ಮೀನುಗಾರಿಕೆಯಲ್ಲಿ ತೊಡಗಿದ್ದ ಸ್ಥಳೀಯ ಮೀನುಗಾರರು ತಮ್ಮ ದೋಣಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.