-->
 ಕಾರುಗಳ ನಡುವೆ ಅಪಘಾತ: 6 ಮಂದಿಗೆ ಗಾಯ

ಕಾರುಗಳ ನಡುವೆ ಅಪಘಾತ: 6 ಮಂದಿಗೆ ಗಾಯ


ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದ ವಿನಿತಾ (22), ಗೌರಮ್ಮ (49), ಕೊಟ್ರೆಗೌಡ (55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡು, ಗಾಯಾಳುಗಳನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

Ads on article

Advertise in articles 1

advertising articles 2

Advertise under the article