-->
 ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ


ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು  ಮಾರಾಟ ಮಾಡುತ್ತಿದ್ದ ಅನಿಲಾ ಪಾನ್ ಸ್ಟಾಲ್ ಹೆಸರಿನ ಅಂಗಡಿಗೆ ದಾಳಿ ನಡೆಸಿ 625.83 ಗ್ರಾಂ ಗಾಂಜಾ ಸಹಿತ ಆರೋಪಿ ಅನಿಲ್ ಎಂಬಾತನನ್ನು ಕಾಪು ತಾಲೂಕಿನ ಬಡಾ ಗ್ರಾಮದ ಎರ್ಮಾಳುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.


ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್‌ಐ ಸಕ್ತಿವೇಲು ಮತ್ತು ಅನಿಲ್ ಕುಮಾರ್ ಟಿ. ನಾಯಕ್ ನೇತೃತ್ವದಲ್ಲಿ ಎಎಸ್‌ಐ ಗಿರೀಶ್ ಯು.ಆರ್, ಸಿಬ್ಬಂದಿಗಳಾದ ಕೃಷ್ಣಪ್ರಸಾದ್, ಮಿಥುನ್, ಸಂದೇಶ್ ಭಂಡಾರಿ, ರಾಘವೇಂದ್ರ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಸೊಕೋ(ಎಸ್‌ಒಸಿಒ) ಅಧಿಕಾರಿಗಳು ಈ ಸಂದರ್ಭ ಮಾದಕ ವಸ್ತುವನ್ನು ಪರೀಕ್ಷಿಸಿ ತನಿಖಾಧಿಕಾರಿಗಳಿಗೆ ಸಹಕರಿಸಿದ್ದರು. ಆರೋಪಿ ಅನಿಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article