-->
ಹಿರಿಯಡ್ಕ: ಕೋಳಿ ಅಂಕಕ್ಕೆ ದಾಳಿ: 8 ಮಂದಿಯ ಬಂಧನ- ನಗದು, ವಾಹನಗಳ ವಶ

ಹಿರಿಯಡ್ಕ: ಕೋಳಿ ಅಂಕಕ್ಕೆ ದಾಳಿ: 8 ಮಂದಿಯ ಬಂಧನ- ನಗದು, ವಾಹನಗಳ ವಶ


ಹಿರಿಯಡ್ಕ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಕೋಳಿಗಳ ಕಾಲಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಅವುಗಳನ್ನು ಕಾಳಗಕ್ಕೆ ಬಿಟ್ಟು ಜೂಜಾಟ ನಡೆಸುತ್ತಿದ್ದ ಪ್ರಕರಣವನ್ನು ಹಿರಿಯಡಕ ಪೊಲೀಸರು ಪತ್ತೆಹಚ್ಚಿ, 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜುಲೈ 13 ರಂದು ಸಂಜೆ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 10 ರಿಂದ 15 ಮಂದಿ ಕೋಳಿ ಅಂಕ ನಡೆಸಿ ಜೂಜಾಟ ನಡೆಸುತ್ತಿರುವುದು ಕಂಡುಬಂದಿದೆ. ಈ ವೇಳೆ ದಾಳಿ ನಡೆಸಿದ ಪೊಲೀಸರು 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದವರು ಪರಾರಿಯಾಗಿದ್ದಾರೆ.

ಬಂಧಿತರಿಂದ 36,270 ರೂಪಾಯಿ ನಗದು, 8 ಮೋಟಾರ್ ಸೈಕಲ್‌ಗಳು ಹಾಗೂ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, 

 ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪ ಕೆ. ಉಡುಪಿ ಉಪ ವಿಭಾಗ ಹಾಗೂ ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರಾದ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ, ಹಿರಿಯಡಕ ಪೊಲೀಸ್ ಠಾಣೆಯ ಪಿಎಸ್‌ಐ ಪುನೀತ್ ಕುಮಾರ್ ಬಿ.ಇ. ಹಾಗೂ ಪಿಎಸ್‌ಐ ವಿಠ್ಠಲ ಮಲವಡಕರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಪ್ರವೀಣ್ ರೈ, ಪ್ರವೀಣ್ ಶೆಟ್ಟಿ, ಕೃಷ್ಣ ಪೂಜಾರಿ, ಉಲ್ಲಾಸ್, ಚನ್ನೇಶ ಹಾಗೂ ಜೀಪ್ ಚಾಲಕ ಶಾಂತರಾಮ್ ಶೆಟ್ಟಿ ಅವರು ಭಾಗವಹಿಸಿದ್ದಾರೆ.

 

Ads on article

Advertise in articles 1

advertising articles 2

Advertise under the article