ಉಡುಪಿ: ಶಾಲಾ ಬಸ್ ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ
Friday, July 10, 2026
ಖಾಸಗಿ ಶಾಲಾ ಬಸ್ ಒಂದು ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡು ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಇಂದು ಮಣಿಪಾಲ ಠಾಣಾ ವ್ಯಾಪ್ತಿಯ ಸರಳಬೆಟ್ಟು ಕೊಡಂಗೆ ದೇವಸ್ಥಾನದ ಬಳಿ ನಡೆದಿದೆ.
ಕ್ರೈಸ್ಟ್ ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದೆ. ಕೊಡಂಗೆ ದೇವಸ್ಥಾನ ಸಮೀಪ ಬಸ್ಸನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ನಿಗೆ ಗಂಭೀರ ಗಾಯಗಳಾಗಿದ್ದು, ಏಳು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳಕ್ಕೆ ಮಣಿಪಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
