ಶ್ರೀ ಕೃಷ್ಣ ಮಠದಲ್ಲಿ ಲಕ್ಷ್ಮೀವರ ತೀರ್ಥ ಶ್ರೀಗಳ ಆರಾಧನೆ: ಪರ್ಯಾಯ ಪೀಠಾಧೀಶರಿಂದ ಪಾದ್ಯ ಸಮರ್ಪಣೆ
Tuesday, July 21, 2026
ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಪಾದುಕೆಗಳಿಗೆ ಪಾದ್ಯ ಸಮರ್ಪಿಸಿ, ಗೌರವ ಸಲ್ಲಿಸಿದರು.
ಶ್ರೀ ಕೃಷ್ಣನ ಸನ್ನಿಧಿಯಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಠದ ಪಂಡಿತರು, ಭಕ್ತರು ಹಾಗೂ ಶಿಷ್ಯವರ್ಗದವರು ಭಾಗವಹಿಸಿದರು. ಶೀರೂರು ಶ್ರೀ ಲಕ್ಷ್ಮೀವರ ತೀರ್ಥರ ಧಾರ್ಮಿಕ ಸೇವೆ, ಸಮಾಜಮುಖಿ ಕಾರ್ಯಗಳು ಹಾಗೂ ಕೃಷ್ಣ ಭಕ್ತಿಗೆ ಸಲ್ಲಿಸಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
