-->
ರಾಜ್ಯದಲ್ಲಿ ಸರಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ: ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಸರಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ: ಡಿ.ಕೆ. ಶಿವಕುಮಾರ್


ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ.

ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ 'ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026' (Google I/O Connect India 2026) ಕಾರ್ಯಕ್ರಮವನ್ನು ಉದ್ಘಾಟಿಸಿ ಈ ಘೋಷಣೆ ಮಾಡಿದರು.

​ಇದರೊಂದಿಗೆ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ 'AI ಹಬ್' (AI Hub) ಅನ್ನು ಇನ್‌ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

​ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದರು.


​AI ಹಬ್: ನವೋದ್ಯಮಗಳು (Startups), ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿ ಕೈಗೊಳ್ಳಲು ಇದು ಅತ್ಯಾಧುನಿಕ ಇನ್‌ಕ್ಯುಬೇಶನ್ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

​ತಂತ್ರಜ್ಞಾನವನ್ನು ಕೇವಲ ಘೋಷಣೆಯಾಗಿ ಉಳಿಸದೆ, ಆಡಳಿತ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡು ಕರ್ನಾಟಕವನ್ನು 'AI-Native' (ಕೃತಕ ಬುದ್ಧಿಮತ್ತೆ ಆಧಾರಿತ) ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಶಿಕ್ಷಕರಿಗೆ ಹೆಚ್ಚು ಪರಿಣಾಮಕಾರಿಯಾಗಿ ಬೋಧಿಸಲು AI ಆಧಾರಿತ ಸಹಾಯಕ ಪರಿಕರಗಳ ಬಳಕೆ, ಕಾಯಿಲೆಗಳ ಆರಂಭಿಕ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಚಿಕಿತ್ಸಾ ಬೆಂಬಲ, ರೈತರಿಗೆ ನೈಜ ಸಮಯದ (Real-time) ನಿಖರ ಹವಾಮಾನ ಮಾಹಿತಿ ನೀಡುವುದು, ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಅತ್ಯಂತ ವೇಗವಾಗಿ ಮತ್ತು ಗೌರವಯುತವಾಗಿ ತಲುಪಿಸುವುದು. ಸ್ಥಳೀಯ ಸಣ್ಣ ಉದ್ಯಮಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು AI ತಂತ್ರಜ್ಞಾನದ ನೆರವು ನೀಡುವುದು ಇದರ ಉದ್ದೇಶ ಎಂದರು. 

ಗೂಗಲ್ ಸಂಸ್ಥೆಯೊಂದಿಗೆ ಪಾಲುದಾರಿಕೆಗೆ ಕರೆ:

​ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಗೂಗಲ್ ಸಂಸ್ಥೆಯ ಕೊಡುಗೆಯನ್ನು ಶ್ಲಾಘಿಸಿದ ಡಿ.ಕೆ. ಶಿವಕುಮಾರ್ ಅವರು, ಮುಖ್ಯವಾಗಿ 5 ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಗೂಗಲ್ ಸಂಸ್ಥೆಗೆ ಆಹ್ವಾನ ನೀಡಿದರು.

Ads on article

Advertise in articles 1

advertising articles 2

Advertise under the article