-->
ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸಮಗ್ರ ಪ್ರಶಸ್ತಿ

ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸಮಗ್ರ ಪ್ರಶಸ್ತಿ


ಮಧ್ಯಪ್ರದೇಶದ ಇಂದೋರ್‌ನಲ್ಲಿ ಜೂನ್ 17ರಿಂದ 21ರವರೆಗೆ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದಿದೆ.


ತಂಡದ ಆಟಗಾರರಾದ ಆವನಿ ಎಸ್. ರಾವ್ ಹಾಗೂ ಧನುಷ್ ಶೆಟ್ಟಿ ಅವರು ಚಿನ್ನದ ಪದಕಗಳನ್ನು ಗೆದ್ದು, ಇಟಲಿಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದ ಪಂದ್ಯಾಕೂಟದಲ್ಲಿ ಉಡುಪಿ ಜಿಲ್ಲೆಯ ಕ್ರೀಡಾಪಟುಗಳು ಒಟ್ಟು 2 ಚಿನ್ನ ಹಾಗೂ 17 ಕಂಚಿನ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಸಾಧನೆಗೈದ ಕ್ರೀಡಾಪಟುಗಳನ್ನು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಹಾಗೂ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವಾಧ್ಯಕ್ಷ ಡಾ. ಎನ್. ಬಿ. ವಿಜಯ ಬಲ್ಲಾಳ್ ಅವರು ದೇವಸ್ಥಾನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಆಶೀರ್ವದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವ ಸಲಹೆಗಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾಧ್ಯಕ್ಷ ವಾಮನ್ ಪಾಲನ್, ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಉಪಾಧ್ಯಕ್ಷ ಅಶೋಕ್ ಕುಲಾಲ್, ಜೊತೆ ಕಾರ್ಯದರ್ಶಿಗಳಾದ ಮೇಘಾ ಹಾಗೂ ಸೂರಜ್, ತಾಂತ್ರಿಕ ನಿರ್ದೇಶಕ ಪವನ್ ಕುಮಾರ್, ಶಿಕ್ಷಕರಾದ ವರದರಾಜ್ ಮತ್ತು ಅಮೃತ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪವನ್ ಕುಮಾರ್ ನಿರೂಪಿಸಿ, ವಂದಿಸಿದರು. 

Ads on article

Advertise in articles 1

advertising articles 2

Advertise under the article