ದ.ಕ.ಜಿಲ್ಲಾ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸಿರ್ ಅಲಿ ಶಿಹಾಬ್ ತಂಙಳ್ ಆಯ್ಕೆ
Saturday, July 11, 2026
ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸಿರ್ ಅಲಿ ಶಿಹಾಬ್ ತಂಙಳ್ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿ ಪ್ರಕಟಿಸಿದೆ.
ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದ ಬಳಿಕ ಖಾಜಿ ಸ್ಥಾನ ತೆರವಾಗಿತ್ತು.
ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ 62ರ ಹರೆಯದ ಪಾಣಕ್ಕಾಡ್ ಸೈಯ್ಯದ್ ನಾಸಿರ್ ಅಲಿ ಶಿಹಾಬ್ ತಂಙಳ್ ಅವರು ದ.ಕ.ಜಿಲ್ಲಾ ಖಾಝಿಯ ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಪದಾಧಿಕಾರಿಗಳು, ಇತರ ಮಸೀದಿಗಳ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಈದ್ಗಾ ಮತ್ತು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಈ ಆಯ್ಕೆಯನ್ನು ಘೋಷಿಸಿದರು.