ಮೂಡುಅಲೆವೂರು ಶಾಲಾ ವಿದ್ಯಾರ್ಥಿಗಳಿಗೆ ಹರಿಪ್ರಸಾದ್ ರೈ ಅವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ
Monday, July 20, 2026
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಇಂದು ಮೂಡು ಅಲೆವೂರು ಕಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಹರಿಪ್ರಸಾದ್ ರೈ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಲಸ್ಟರ್ ಸಂಯೋಜಕರಾದ ಪ್ರದೀಪ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಭಾವತಿ ಆರ್. ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ಸಾವಿತ್ರಿ, ವಿಷ್ಣು ಸೇವಾ ಬಳಗದ ಸುರೇಶ್ ನಾಯ್ಕ್, ಮಹಿಳಾ ಮಂಡಳದ ಗೀತಾ ಹಾಗೂ ಶಾಲಾ ಶಿಕ್ಷಕಿಯರಾದ ಲತಾ ಮತ್ತು ದಿವ್ಯ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಭಾವತಿ ಆರ್. ಶೆಟ್ಟಿ ಅವರು ಸ್ವಾಗತಿಸಿ, ನಿರೂಪಿಸಿದರು. ಶಾಲಾ ಶಿಕ್ಷಕಿ ದಿವ್ಯ ಅವರು ವಂದಿಸಿದರು.
