ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ತರಬೇತಿ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜರುಗಿತು.
ಆಡಳಿತ ನಿರ್ವಹಣೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಶುಕ್ರವಾರ ಉದ್ಘಾಟಿಸಿದರು.
ಮತ್ತ್ವ ಸಂಪದ ಯೋಜನೆಯ ಪರಿಣಾಮಕಾರಿ ಅನುಷ್ಠಾನವನ್ನು ಜನ ಸಹಭಾಗಿತ್ವದಲ್ಲಿ ಮಾಡಲು ಮೀನುಗಾರಿಕಾ ಇಲಾಖಾಧಿಕಾರಿಗಳು ಕಟಿಬದ್ಧರಾಗಬೇಕು. ಮೀನುಗಾರರಿಗೆ ನಾನಾ ಯೋಜನೆಗಳ ಮಾಹಿತಿ, ತರಬೇತಿ ಸಿಗಬೇಕು. ಯಾಂತ್ರಿಕ ಮೀನುಗಾರಿಕೆ ಆ.1ರಿಂದ ಆರಂಭವಾಗಲಿದ್ದು, ಮಧ್ಯ ಪ್ರಾಚ್ಯ ಯುದ್ಧ ಹಿನ್ನೆಲೆಯಲ್ಲಿ ನಾಡ ದೋಣಿಗಳಿಗೆ ಸೀಮೆಎಣ್ಣೆ ಸಹಿತ ಯಾಂತ್ರಿಕ ದೋಣಿಗಳಿಗೆ ಡೀಸೆಲ್ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಹೆಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಇವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ರೆನಿಟ ಡಿಸೋಜ "ಮೀನುಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು" ಮಾಹಿತಿ ನೀಡಿದರು ಹಾಗೂ ಸಂತೋಷ್ ಶೆಟ್ಟಿ, ಸಹಾಯಕ ಪ್ರಾಧ್ಯಾಪಕರು, ಸೈಂಟ್ ಫಿಲೋಮಿನಾ ಕಾಲೇಜು, ಪುತ್ತೂರು ಇವರು "ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ" ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು,
.