-->
 ಶಾಸಕ ಯಶ್ಪಾಲ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು: ಶಾಸಕರ ಪರ ಘೋಷಣೆ

ಶಾಸಕ ಯಶ್ಪಾಲ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು: ಶಾಸಕರ ಪರ ಘೋಷಣೆ


ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಎದುರು ಜಮಾಯಿಸಿ ಶಾಸಕ ಯಶ್ಪಾಲ್ ಸುವರ್ಣ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಶಾಸಕರಿಗೆ ಬೆಂಬಲ ವ್ಯಕ್ತಪಡಿಸಿ, ಕಾಂಗ್ರೆಸ್‌ನ ನಡೆಗೆ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಶಾಸಕರ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಂಡಿದ್ದರು.




Ads on article

Advertise in articles 1

advertising articles 2

Advertise under the article