-->
ರಾಹುಲ್, ಪ್ರಿಯಾಂಕಾ, ಅಖಿಲೇಶ್ ಯಾದವ್ ಪೊಲೀಸ್ ವಶಕ್ಕೆ

ರಾಹುಲ್, ಪ್ರಿಯಾಂಕಾ, ಅಖಿಲೇಶ್ ಯಾದವ್ ಪೊಲೀಸ್ ವಶಕ್ಕೆ


ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪ್ರಧಾನಿ ನಿವಾಸದೆದುರು ಧರಣಿ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸಹಿತ ಹಲವಾರು ಸಂಸದರು ಹಾಗೂ ರಾಜಕೀಯ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ತೆರೆದುಕೊಂಡಿದ್ದಾರೆ. 
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇರಳ ಮುಖ್ಯಮಂತ್ರಿ ಸತೀಶನ್ ಮತ್ತಿತರ ನಾಯಕರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ರಾಹುಲ್ ಅವರನ್ನು ಪ್ರತಿಭಟನಾ ಸ್ಥಳದಲ್ಲಿ ಭೇಟಿಯಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ವಿಫಲ ಯತ್ನ ನಡೆಸಿದ್ದರು. 

ಈ ನಡುವೆ ಮಾಧ್ಯಮಗಳಿಗೆ ಹೇಳಿ ನೀಡಿದ ರಾಹುಲ್, "ವಿದ್ಯಾರ್ಥಿಗಳ ಮೇಲೆ ನಡೆಯುವ ದಾಳಿ ಎಂದರೆ ಪ್ರತಿಯೊಂದು ಭಾರತೀಯ ಕುಟುಂಬದ ಮೇಲಿನ ದಾಳಿಯಾಗಿದೆ. ಪ್ರಧಾನಿ ಮೋದಿ ಅವರು ಯಾವುದೇ ಉತ್ತರದಾಯಿತ್ವವಿಲ್ಲದೆ, ಯಾವುದೇ ಶಿಕ್ಷ ಅನುಃವಿಸದೆ ತಪ್ಪಿಸಿಕೊಳ್ಳಬಹುದು ಎಂದು ನಂಬಿದ್ದಾರೆ. ಆದರೆ ಈ ಬಾರಿ ಅದು ಸಾಧ್ಯವಿಲ್ಲ” ಎಂದಿದ್ದಾರೆ.

"ನಮ್ಮ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ನಂಬುವ ಪ್ರತಿಯೊಬ್ಬ ದೇಶಭಕ್ತ ಭಾರತೀಯನೂ ಪ್ರಧಾನಿಯವರ ನಿವಾಸದ ಮುಂದೆ ನಮ್ಮ ಧರಣಿಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದ್ದರು.

Ads on article

Advertise in articles 1

advertising articles 2

Advertise under the article