-->
 ಮಂತ್ರಾಲಯದ ಬಳಿ ರಸ್ತೆ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿಶೆಟ್ಟಿ ಸಾವು

ಮಂತ್ರಾಲಯದ ಬಳಿ ರಸ್ತೆ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿಶೆಟ್ಟಿ ಸಾವು


ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಸಮೀಪ ಮಂಗಳವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಲ್ವರ್ಟ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article