-->
 ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ


ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಇದಕ್ಕೂ ಮುನ್ನ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL)‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಆಡಳಿತಾತ್ಮಕ ಅನುಭವ ಹೊಂದಿರುವ ರಾಹುಲ್ ರತ್ನಂ ಪಾಂಡೆ ಅವರ ನೇಮಕದಿಂದ ಮಹಾನಗರ ಪಾಲಿಕೆಯ ಆಡಳಿತಕ್ಕೆ ಮತ್ತಷ್ಟು ಚುರುಕು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

ಅಧಿಕಾರ ಸ್ವೀಕಾರದ ವೇಳೆ ಪಾಲಿಕೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ನೂತನ ಆಯುಕ್ತರನ್ನು ಸ್ವಾಗತಿಸಿದರು.

Ads on article

Advertise in articles 1

advertising articles 2

Advertise under the article