-->
ಗುರುಪುರ ಹೋಬಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ನಿಯೋಗ ಭೇಟಿ

ಗುರುಪುರ ಹೋಬಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ನಿಯೋಗ ಭೇಟಿ


ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದೆ.


ಹೋರಾಟದ ಮುಂದಿನ ಹಂತವನ್ನು ರೂಪಿಸಲು ಸಿಪಿಐಎಂ ಹಾಗು ಸಮಾನ ಮನಸ್ಕ ಸಂಘಟ‌‌ನೆಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಜಿಲ್ಲೆಯ ಸರಕಾರಿ ಆಸ್ಪತ್ರೆಗಳಿಗೆ ತೆರಳಿ ಅಲ್ಲಿ‌ನ ಸ್ಥಿತಿಗತಿಗಳ ಕುರಿತು ಮಾಹಿತಿ ಸಂಗ್ರಹಿಲಾಗುತ್ತಿದೆ. 


ಅದರ ಭಾಗವಾಗಿ ಗುರುಪುರ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಪಿಐಎಂ ನೇತೃತ್ವದ ನಿಯೋಗ ಭೇಟಿ ನೀಡಿ ವೈದ್ಯರು, ಸಿಬ್ಬಂದಿಗಳು, ಔಷಧಿ ಪೂರೈಕೆ, ಮೂಲಭೂತ ಸೌಲಭ್ಯಗಳ ವಿವರವಾದ ಮಾಹಿತಿ ಸಂಗ್ರಹಿಸಲಾಯಿತು.

ನಿಯೋಗದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಸಿಪಿಎಂ ಗುರುಪುರ ವಲಯ ಕಾರ್ಯದರ್ಶಿ ಸದಾಶಿವ ದಾಸ್, ಮುಖಂಡರಾದ ವಸಂತಿ ಕುಪ್ಪೆಪದವು, ನ್ಯಾಯವಾದಿ ಮನೋಜ್ ವಾಮಂಜೂರು, ಅಶೋಕ ಬಂಗೇರ,ಹೊನ್ನಯ್ಯ ಅಮೀನ್, ಬಾಬು ಸಾಲ್ಯಾನ್ ತಿರುವೈಲು, ಆನಂದ ಪೂಜಾರಿ ಇರುವೈಲು, ಸಾಮಾಜಿಕ ಕಾರ್ಯಕರ್ತರಾದ ಬಾವ ಪದರಂಗಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article