ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗಣತಿ ನಮೂನೆ ಭರ್ತಿ ಸಹಾಯ ಕೇಂದ್ರಕ್ಕೆ ಚಾಲನೆ
Wednesday, July 15, 2026
ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಂಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಬಿ.ಎಲ್.ಒ.ಗಳು ವಿತರಿಸಿರುವ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಲು ನೆರವಾಗುವ ಉದ್ದೇಶದಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ವಿಶೇಷ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮಾಜಿ ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಅವರು ಜಂಟಿಯಾಗಿ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪಕ್ಷದ ಮುಖಂಡರಾದ ನರಸಿಂಹ ಮೂರ್ತಿ, ಮಹಾಬಲ ಕುಂದರ್, ನಾಗೇಶ್ ಉದ್ಯಾವರ, ಜಯಕುಮಾರ್, ಮಮತಾ ಶೆಟ್ಟಿ, ಹಮ್ಮದ್, ಸತೀಶ್ ಕುಮಾರ್ ಮಂಚಿ, ಸತೀಶ್ ಕೊಡವೂರು, ಸುಕೇಶ್ ಕುಂದರ್, ಸಜ್ಜನ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಶರತ್ ಶೆಟ್ಟಿ, ಸಂಧ್ಯಾ ತಿಲಕ್ ರಾಜ್, ಸಂಜಯ್ ಆಚಾರ್ಯ, ಲಕ್ಷ್ಮೀಶ್ ಶೆಟ್ಟಿ, ಸುಧಾಕರ್ ಕನ್ನರ್ಪಾಡಿ, ವಿಲ್ಸನ್ ಸಿಕ್ವೇರಾ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
.jpeg)
