-->
ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಮಣಿಪಾಲ ಠಾಣೆಗೆ ದೂರು

ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಮಣಿಪಾಲ ಠಾಣೆಗೆ ದೂರು


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಭಾಷಣ ಮಾಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಲಾಗಿದೆ.

ಜುಲೈ 28ರಂದು ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ, ಪ್ರಚೋದನಕಾರಿ ಮತ್ತು ಅಸಂವಿಧಾನಿಕ ಹೇಳಿಕೆಗಳನ್ನು ನೀಡಿದ್ದು, ಸಾರ್ವಜನಿಕರಲ್ಲಿ ದ್ವೇಷ ಮತ್ತು ಅಶಾಂತಿ ಉಂಟುಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹೇಳಿಕೆಗಳು ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 192, 196, 352 ಸೇರಿದಂತೆ ಇತರ ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ನಿಟ್ಟೆ ದಿನಕರ್ ಶೆಟ್ಟಿ, ಉಡುಪಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article