-->
 ತೆಂಕಪೇಟೆ ಸಮೀಪ ಹದಗೆಟ್ಟ ರಸ್ತೆ: ಬೃಹತ್ ಹೊಂಡಗಳಿಂದ ವಾಹನ ಸವಾರರಿಗೆ ಅಪಾಯ

ತೆಂಕಪೇಟೆ ಸಮೀಪ ಹದಗೆಟ್ಟ ರಸ್ತೆ: ಬೃಹತ್ ಹೊಂಡಗಳಿಂದ ವಾಹನ ಸವಾರರಿಗೆ ಅಪಾಯ


ಉಡುಪಿ ನಗರದ ತೆಂಕಪೇಟೆಯ ಭುವನೇಂದ್ರ ಮಂಟಪ ಸಮೀಪದ ರಸ್ತೆಯಲ್ಲಿ ಬೃಹತ್ ಹೊಂಡಗಳು ಉಂಟಾಗಿ ಸಾರ್ವಜನಿಕರು ಹಾಗೂ ವಾಹನಸವಾರರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪ್ರಮುಖ ವ್ಯಾಪಾರ ಪ್ರದೇಶವಾಗಿರುವ ಈ ಭಾಗದಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ.


ಕಳೆದ ಕೆಲವು ವಾರಗಳಿಂದ ನಿರಂತರ ಮಳೆಯ ಪರಿಣಾಮ ರಸ್ತೆಯ ಮೇಲ್ಮೈ ಹದಗೆಟ್ಟು ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ರಾತ್ರಿ ವೇಳೆಯಲ್ಲಿ ಬೆಳಕಿನ ಕೊರತೆಯ ಜೊತೆಗೆ ಹೊಂಡಗಳು ಸ್ಪಷ್ಟವಾಗಿ ಕಾಣಿಸದ ಕಾರಣ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುವ ಘಟನೆಗಳೂ ಸಂಭವಿಸುತ್ತಿವೆ.


ಹಲವು ಬಾರಿ ಸಂಬಂಧಿತ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಇನ್ನೂ ತಾತ್ಕಾಲಿಕ ದುರಸ್ತಿ ಕಾರ್ಯವೂ ಪೂರ್ಣವಾಗಿಲ್ಲ ಎಂದು ನಾಗರಿಕರೊಬ್ಬರು ತಿಳಿಸಿದ್ದಾರೆ. ಮಳೆಗಾಲದ ನಡುವೆ ತುರ್ತು ಕ್ರಮ ಕೈಗೊಳ್ಳದಿದ್ದರೆ ಅಪಘಾತಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಹಾಗಾಗಿ ಶೀಘ್ರವೇ ರಸ್ತೆ ಹೊಂಡಗಳಿಗೆ ಮುಕ್ತಿ ನೀಡಿ ಎಂಬ ಆಗ್ರಹ ಕೇಳಿ ಬಂದಿದೆ. 

Ads on article

Advertise in articles 1

advertising articles 2

Advertise under the article