ನಿವೃತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಪ್ರಸನ್ನ ಕುಮಾರ್ ನಿಧನ
Monday, July 27, 2026
ಕಾರ್ಕಳ ತಾಲೂಕಿನ ಸಾಣೂರು ನಿವಾಸಿ ಹಾಗೂ ಪೊಲೀಸ್ ಇಲಾಖೆಯ ನಿವೃತ್ತ ಹೆಡ್ ಕಾನ್ಸ್‌ಟೇಬಲ್ ಪ್ರಸನ್ನ ಕುಮಾರ್ ಅವರು ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ, ಸೊಸೆ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯು ಸೋಮವಾರ (ಜುಲೈ 27) ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಪ್ರಸನ್ನ ಅವರ ನಿಧನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.