ನಾಳೆ ದ. ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Friday, July 31, 2026
ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ. 1ರ ಶನಿವಾರ ರಜೆ ಘೋಷಿಸಲಾಗಿದೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದು, ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದ್ದಾರೆ..