ಕುಂದಾಪುರ ಶೂಟೌಟ್: ಮಣಿಪಾಲ ಆಸ್ಪತ್ರೆಯಲ್ಲಿ ರಿಚರ್ಡ್ ಮರಣೋತ್ತರ ಪರೀಕ್ಷೆ
Friday, July 31, 2026
ಕುಂದಾಪುರದ ಹೋಲಿ ರೋಜರಿ ಚರ್ಚ್ ಸಮೀಪ ನಡೆದ ಶೂಟೌಟ್‌ನಲ್ಲಿ ಕೊಲೆಯಾದ ಬಾರ್ಕೂರಿನ ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರ ಮರಣೋತ್ತರ ಪರೀಕ್ಷೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆಯಲಿದೆ.
ಘಟನೆ ಬಳಿಕ ಮೃತದೇಹವನ್ನು ಈಗಾಗಲೇ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಆರೋಪಿ ಡೆರಿಕ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.