-->
 ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಕಾರವಾರ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಕಾರವಾರ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ


ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಳೆಯ ತೀವ್ರತೆ ಹೆಚ್ಚುತ್ತಿರುವುದನ್ನು ಗಮನಿಸಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಆಡಳಿತದಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Ads on article

Advertise in articles 1

advertising articles 2

Advertise under the article