-->
 ಹೆದ್ದಾರಿಯಲ್ಲಿ ವಿಚಿತ್ರ ವರ್ತನೆ: ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

ಹೆದ್ದಾರಿಯಲ್ಲಿ ವಿಚಿತ್ರ ವರ್ತನೆ: ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್


ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ವಿಚಿತ್ರ ವರ್ತನೆಯ ಮೂಲಕ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ.

ಬೆಲ್ಲದ ಗಣಪತಿ ದೇವಸ್ಥಾನ ಸಮೀಪ ನಿವಾಸಿಯಾಗಿರುವ ರಂಜಿತ್ ಸೋಮಯಾಜಿ (25) ಎಂಬಾತ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಇದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

ಉದ್ದನೆಯ ತಲೆಕೂದಲು ಹಾಗೂ ಗಡ್ಡ ಹೊಂದಿದ್ದ ಯುವಕನ ವರ್ತನೆ ಕಂಡು ಸ್ಥಳೀಯರು ತಕ್ಷಣ ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ ವೇಳೆ, ಆರೋಪಿಯು ಕತ್ತಿ ಬೀಸಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಂಜಿತ್ ಸೋಮಯಾಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆತನ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತವಾದರೂ, ಮಾನಸಿಕ ಚಿಕಿತ್ಸೆಗೆ ಒಳಗಾಗಿರುವ ಕುರಿತು ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಕಾರಣ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಕೋಟ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


 


Ads on article

Advertise in articles 1

advertising articles 2

Advertise under the article