-->
 ಸುಪ್ರೀಂ ಕೋರ್ಟ್‌ನಿಂದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

ಸುಪ್ರೀಂ ಕೋರ್ಟ್‌ನಿಂದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ


ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಮಾನ್ಯ ಮಾಡಲು ಒಪ್ಪಿಲ್ಲ.

ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಕೂಡ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು.

ಹೀಗಾಗಿ, ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲಿಯೂ ಮಧ್ಯಂತರ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ, ಸಂಬಂಧಿತ ಗಡಿಪಾರು ಆದೇಶ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

Ads on article

Advertise in articles 1

advertising articles 2

Advertise under the article