-->
 ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ: ಓರ್ವ ಆರೋಪಿ ಬಂಧನ

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ: ಓರ್ವ ಆರೋಪಿ ಬಂಧನ


ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿ ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳದ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಬಂಧಿತ ಆರೋಪಿ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಕಳೆದ ಜುಲೈ 13ರಂದು ರಾತ್ರಿ ಮೇಲ್ಛಾವಣಿ ಕೊರೆದು ದುಷ್ಕರ್ಮಿಗಳು ಬ್ಯಾಂಕ್ ಒಳಗೆ ಪ್ರವೇಶಿಸಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದರು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. 

Ads on article

Advertise in articles 1

advertising articles 2

Advertise under the article