-->
 ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ


ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.


ಮುಂಜಾನೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರು ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದರು. ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಆವರಣದಲ್ಲಿ Z-ಪ್ಲಸ್ ಭದ್ರತೆ ಒದಗಿಸಲಾಗಿದ್ದು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.


ಪೂಜೆ ಪೂರ್ಣಗೊಂಡ ಬಳಿಕ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಗೌರವ ಪತ್ರ ನೀಡಿ ಸನ್ಮಾನಿಸಲಾಯಿತು.

ಕೇರಳದ ಮುಖ್ಯಮಂತ್ರಿ ಆದ ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿರುವ ಸತೀಶನ್ ಅವರು ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಭೇಟಿ ಬಳಿಕ ಮುಖ್ಯಮಂತ್ರಿ ಅವರು ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. 

Ads on article

Advertise in articles 1

advertising articles 2

Advertise under the article