ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಪದಗ್ರಹಣ ಸಮಾರಂಭ
Monday, July 20, 2026
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಎಸ್.ಸಿ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಕೃಷ್ಣಮೂರ್ತಿ ಬಿ.ಡಿ., ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್ ಹಾಗೂ ರೇಷ್ಮಾ ಶೆಟ್ಟಿ, ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಮತ್ತು ಸುಧಾಕರ ಅಮೀನ್ ಸೇರಿದಂತೆ ಜಿಲ್ಲಾ ಎಸ್.ಸಿ ಮೋರ್ಚಾದ ನೂತನ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

