-->
 ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ

ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ.

ರಾತ್ರಿ ವೇಳೆ ಕಳ್ಳರು ಬ್ಯಾಂಕ್‌ಗೆ ನುಗ್ಗಲು ಯತ್ನಿಸಿದ್ದು, ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಬ್ಯಾಂಕಿನ ಮೇಲ್ಛಾವಣಿಯನ್ನು ಮುರಿದು ಒಳಗೆ ಪ್ರವೇಶಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಬೆರಳಚ್ಚು ತಜ್ಞರ ತಂಡ ಹಾಗೂ ಸೋಕೋ ತಂಡಗಳು ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬ್ಯಾಂಕಿನಲ್ಲಿದ್ದ ಯಾವುದೇ ಬೆಲೆಬಾಳುವ ವಸ್ತುಗಳು ಅಥವಾ ನಗದು ಕಳ್ಳತನವಾಗಿಲ್ಲ ಎಂದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Ads on article

Advertise in articles 1

advertising articles 2

Advertise under the article