ತೂಗು ಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ
Tuesday, July 07, 2026
ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಡಾ.ಗಿರೀಶ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು, ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ . ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ತೂಗು ಸೇತುವೆಗಳ ಸರದಾರ ಎಂದು ಹೆಸರು ಮಾಡಿದ್ದರು. 2017ರಲ್ಲಿ ದೇಶ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂಜಿನಿಯರ್ ಪದವಿ ಪಡೆದ ಬಳಿಕ ಆಯಶ್ಯಿಲ್ಪ ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು. ಪತ್ನಿ ದಿ.ಉಷಾ, ಪುತ್ರರಾದ ಸುದರ್ಶನ್, ಪತಂಜಲಿ, ಪುತ್ರಿ ರಷ್ಯಾ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.