ಮಟ್ಕಾ ಪ್ರಕರಣದ ಆರೋಪಿ ರಾಮರಾಜ್ ಗಡಿಪಾರು
Sunday, July 19, 2026
ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಆರೋಪಿಯಾಗಿರುವ ರಾಮರಾಜ್ @ ರಮೇಶ ಅರಸ್ (48) ಎಂಬಾತನಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಮಠದಬೆಟ್ಟು ನಾಗಬನ ಬಳಿ ಬಾಡಿಗೆ ಮನೆ ನಿವಾಸಿ ರಾಮರಾಜ್ @ ರಮೇಶ ಅರಸ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ದಾಖಲಾದ ಐದು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿದ್ದು, ಇನ್ನೊಂದು ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಾಯ್ದೆಯ ಸಂಬಂಧಿತ ವಿಧಿಗಳಡಿ ಗಡಿಪಾರು ಆದೇಶ ಹೊರಡಿಸಲಾಗಿದ್ದು, ರಾಮರಾಜ್ @ ರಮೇಶ ಅರಸ್‌ನನ್ನು ಚಿಕ್ಕಮಗಳೂರು ಜಿಲ್ಲೆಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.