-->
 ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ


ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ಯುವಕನೋರ್ವನ ಶವ ಮನೆ ಸಮೀಪದ ಹೊರಭಾಗದಲ್ಲಿ ಪತ್ತೆಯಾಗಿದೆ. 

ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಮೃತಪಟ್ಟ ಯುವಕ. ಅವಿವಾಹಿತರಾಗಿದ್ದ ಕಾರ್ತಿಕ್ ಶೆಟ್ಟಿ ಅವರು ಹಿಟಾಚಿ ಹಾಗೂ ಜೆಸಿಬಿ ಯಂತ್ರಗಳ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಒಂದು ದಿನದಿಂದ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರು. ಶನಿವಾರ ಬೆಳಿಗ್ಗೆ ಮನೆಯ ಸಮೀಪದ ಶೆಡ್ ಹೊರಗೆ ಅವರ ಮೃತದೇಹ ಕಂಡುಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article