ಉಡುಪಿಯಲ್ಲಿ ಅಕ್ರಮ ಮದ್ಯ ಮಾರಾಟ: ಓರ್ವ ಆರೋಪಿಯ ಬಂಧನ
Saturday, July 04, 2026
ಉಡುಪಿ ನಗರದ ಹಳೆ ಬಸ್ಸು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಬಾಗಲಕೋಟೆ ಮೂಲದ ಕಂಟ್ಯಪ್ಪ ಮೇಥಿ (32) ಎಂದು ತಿಳಿದುಬಂದಿದೆ.
ಖಚಿತ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿರುವ ಹಿನ್ನಲೆಯಲ್ಲಿ ನಗರ ಪೋಲಿಸ್ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿದಾಗ ಸ್ಕೂಟರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ, ಸಿಟಿ ಬಸ್ಸು ನಿಲ್ದಾಣದಲ್ಲಿ ಮದ್ಯದ ಪೊಟ್ಟಣಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿತು. ತಕ್ಷಣ ಪೋಲಿಸರು ಅಕ್ರಮ ಮದ್ಯ ಮಾರಟಗಾರನನ್ನು ವಶಕ್ಕೆ ಪಡೆದುಕೊಂಡು, ತಪಾಸಣೆ ನಡೆಸಿದಾಗ 4,ಲೀಟರ್ ಮದ್ಯ ಪತ್ತೆಯಾಗಿದೆ. ಈ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.
ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಉಪನಿರೀಕ್ಷಕ ಭರತೇಶ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮುಖ್ಯ ಆರಕ್ಷಕ ಬಶೀರ್ ಭಾಗಿಯಾಗಿದ್ದರು. ಪೋಲಿಸರು ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರವನ್ನು ಪಡೆದುಕೊಂಡಿದ್ದರು.