ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಯಕ್ಷ ಧ್ರುವ– ಯಕ್ಷ ಶಿಕ್ಷಣ’ ಕಾರ್ಯಕ್ರಮ
Tuesday, July 21, 2026
ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ‘ಯಕ್ಷ ಧ್ರುವ – ಯಕ್ಷ ಶಿಕ್ಷಣ’ ಕಾರ್ಯಕ್ರಮವು ಕೌಡೂರು ಸಮೀಪದ ಬೈಲೂರು ಮೈನ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ತುಳುವ ಸಂಪ್ರದಾಯದಂತೆ ಕಳಸದಲ್ಲಿ ಹಿಂಗಾರ ಹೂ ಅರಳಿಸಿ, ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಪಂಚಮೇಳ ಯಕ್ಷಗಾನ ವ್ಯವಸ್ಥಾಪಕರಾದ ಶ್ರೀಪಳ್ಳಿ ಕಿಶನ್ ಕುಮಾರ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಕಾರ್ಕಳ ವಲಯದ ಪ್ರಧಾನ ಕಾರ್ಯದರ್ಶಿ ಕಾಂತವರ ಮಹಾವೀರ್ ಪಾಂಡೆ, ಕಾರ್ಕಳ ಘಟಕದ ಅಧ್ಯಕ್ಷ ವಿಜಯ ಶೆಟ್ಟಿ, ಯಕ್ಷಗುರು ಮರ್ಣಿ ಸುರೇಶ್ ಆಚಾರ್ಯ, ಶಾಲೆಯ ಮುಖ್ಯೋಪಾಧ್ಯಾಯರಾದ ಆಶಾ ಬಾನು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ಪುಷ್ಪ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಚಂದ್ರಿಕಾ ರಾವ್, ಎಣ್ಣೆಹೊಳೆ ಶಾಲೆಯ ಮುಖ್ಯೋಪಾಧ್ಯಾಯ ಉಮೇಶ್ ನಾಯಕ್, ಬೈಲೂರು ಕ್ಲಸ್ಟರ್ ಸಿ.ಆರ್.ಪಿ. ವಿಶ್ವನಾಥ್ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಅಶ್ವಿತಾ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಆಶಾ ಬಾನು ಅವರು ಸ್ವಾಗತಿಸಿ, ಸಹ ಶಿಕ್ಷಕಿ ಸವಿತಾ ಅವರು ವಂದಿಸಿದರು. ಸಹ ಶಿಕ್ಷಕಿ ಸುಮಾ ದೇವಿ ನಿರೂಪಿಸಿದರು.
.jpeg)