-->
 ಹೆಜಮಾಡಿ ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ತುರ್ತು ಕ್ರಮಕ್ಕೆ ಸೂಚನೆ

ಹೆಜಮಾಡಿ ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ತುರ್ತು ಕ್ರಮಕ್ಕೆ ಸೂಚನೆ


ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಹೆಜಮಾಡಿ–ನಡಿಪಟ್ನ ಸೇರಿದಂತೆ ವಿವಿಧ ಭಾಗಗಳಲ್ಲಿ ಉಂಟಾಗಿರುವ ಕಡಲ್ಕೊರೆತದ ಪರಿಸ್ಥಿತಿಯನ್ನು ವೀಕ್ಷಿಸಿದರು. ಕಡಲ್ಕೊರೆತದಿಂದ ರಸ್ತೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ತಕ್ಷಣ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.  


ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶರಣ್ ಕುಮಾರ್ ಮಟ್ಟು, ಸುಧಾಕರ್ ಕರ್ಕೇರ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಅಭಿಯಂತರರಾದ ಪ್ರಶಾಂತ್, ಸ್ಥಳೀಯರಾದ ಕೃಷ್ಣ ಗುರಿಕಾರ, ಯತೀಶ್ ಮೆಂಡನ್, ರಕ್ಷಿತ್ ಸಾಲ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article